ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ ಅಕ್ಟೋಬರ್ 03 ರಂದು ನಡೆಸಲು ನಿರ್ಧರಿಸಲಾಗಿದೆ.
ಒಟ್ಟು 402 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು 66,990 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ