* 2022 ರ 67 ನೇ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ “ನನ್ನ ನಾಡು ನನ್ನ ಹಾಡು – ಕೋಟಿ ಕಂಠ ಗಾಯನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
* ಕರ್ನಾಟಕ ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಕೂಡ ಗಾಯನ ಹಮ್ಮಿಕೊಳ್ಳಲಾಗಿದೆ, 10,000 ಕ್ಕೂ ಹೆಚ್ಚು ಸ್ಥಳಗಳಲ್ಲಿ, ಗಡಿನಾಡುಗಳಲ್ಲಿ, ಹೊರರಾಜ್ಯದಲ್ಲಿ, ಹೊರದೇಶದಲ್ಲಿ ಒಂದು ಕೋಟಿಗೂ ಹೆಚ್ಚು ಕಂಠಗಳಲ್ಲಿ ಕನ್ನಡ ಗಾಯನ ಮೊಳಗಳಿವೆ.
* ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ಜನರು ಗೀತ ಗಾಯನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ, 41 ದೇಶಗಳು, 27 ರಾಜ್ಯಗಳು, 18,800 ಸಂಘ-ಸಂಸ್ಥೆಗಳು, 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ಕನ್ನಡದ ಹಾಡುಗಳು ಮೊಳಗಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಿಳಿಸಿದೆ.
* ಬೆಂಗಳೂರಿನ ವಿಧಾನಸೌಧ ಮೆಟ್ಟಿಲು, ಎಲ್ಲ ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು, ಆಟೊ ತಂಗುದಾಣಗಳು, ಕಾರಾಗೃಹ, ಐಟಿಬಿಟಿ ಸಂಸ್ಥೆಗಳು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಲಾಲ್ಬಾಗ್ಗಳಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.
* ಮೈಸೂರು ಅರಮನೆ, ಚಿತ್ರದುರ್ಗದ ಕೋಟೆ, ಮಂಗಳೂರು ಕಡಲತೀರ, ತುಮಕೂರು ಸಿದ್ದಗಂಗಾ ಮಠ, ಪ್ರವಾಸಿ ತಾಣಗಳಾದ ಶೃಂಗೇರಿ, ಹಂಪಿ, ಬೇಲೂರು, ಪಾವಗಡದ ಸೌರಶಕ್ತಿ ಘಟಕ, ರಾಯಚೂರು ಉಷ್ಣವಿದ್ಯುತ್ ಸ್ಥಾವರ, ಮಣಿಪಾಲದ ಕೆಎಂಸಿ, ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ ಹಲವೆಡೆ ಕಾರ್ಯಕ್ರಮ ನಡೆಯಲಿದೆ.
Subscribe to Updates
Get the latest creative news from FooBar about art, design and business.