* 2023 ಜನವರಿ 6 , 7 ಮತ್ತು 8 ರಂದು ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ದಿನಾಂಕವನ್ನುಅಂತಿಮಗೊಳಿಸಿದ್ದಾರೆ.
* ಅಕ್ಟೋಬರ್ 20 ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ, ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಬರುವ ನಿರೀಕ್ಷೆ ಇದ್ದು, ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ, 30 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.
* ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
Subscribe to Updates
Get the latest creative news from FooBar about art, design and business.