* ಜೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್‌ನಲ್ಲಿ 88.44 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ಡೈಮಂಡ್ ಲೀಗ್ ಟ್ರೋಫಿ ಜಯಿಸಿಕೊಂಡರು..
* ಬೆಳ್ಳಿ ಪದಕದ ವಿಜೇತ ಜೆಕ್ ರಿಪಬಲಿಕ್ ಯಾಕುಬ್ 86.94 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನವನ್ನು ತಮ್ಮದಾಗಿಸಿಕೊಂಡರು.
* ಮತ್ತು ಜರ್ಮನಿಯ ಜೂಲಿಯನ್ ವೆಬರ್ 83.73 ಮೀಟರ್ ಮೂರನೇ ಸ್ಥಾನವನ್ನು ಪಡೆದುಕೊಂಡರು.
* ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ ಎನ್ನುವ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ.
* ನೀರಜ್ ಅವರ ಮೊದಲ ಪ್ರಯತ್ನದಲ್ಲಿ 84.15 ಮೀಟರ್ ಎಸೆದು ಹಿನ್ನಡೆ ಅನುಭವಿಸಿದರು. ಎರಡನೇ ಪ್ರಯತ್ನದಲ್ಲಿ ತಮ್ಮ ಪ್ರದರ್ಶನ ಉತ್ತಮಪಡಿಸಿಕೊಂಡ ನೀರಜ್ ಚೋಪ್ರಾ 86 ಮೀಟರ್ ದೂರ ಎಸೆದರು. ತಮ್ಮ ಮೂರನೇ ಪ್ರಯತ್ನದಲ್ಲಿ 88 ಮೀಟರ್ ದೂರ ಜಾವೆಲಿನ್ ಎಸೆದರು,
* ನೀರಜ್ ಚೋಪ್ರಾ ಈ ಮೊದಲು 2017 ರಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್‌ನಲ್ಲಿ 7 ನೇ ಸ್ಥಾನ ಪಡೆದುಕೊಂಡಿದರು.
* ನಂತರ 2018 ರಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ತಲುಪಿದ್ದ ಚೋಪ್ರಾ ಕಡಿಮೆ ಅಂತರದಲ್ಲಿ ಕಂಚಿನ ಪದಕ ಗೆಲ್ಲುವ ಅವಕಾಶ ತಪ್ಪಿಸಿಕೊಂಡರು. ಚೋಪ್ರಾ 2022 ರಲ್ಲಿ ಡೈಮಂಡ್ ಲೀಗ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.