* ನಾಡಹಬ್ಬ ‘ಮೈಸೂರು ದಸರಾ’ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
* ಸೆಪ್ಟೆಂಬರ್ 26 ರಂದು ಬೆಳಿಗ್ಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಪೂಜೆ ನೆರವೇರಲಿದೆ. ಅನಂತರ ದಸರಾಗೆ ಅಧಿಕೃತ ಚಾಲನೆ ದೊರೆಯಲಿದೆ. ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು.
* ರಾಜ್ಯದಾದ್ಯಂತ 2022 ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ನಡೆಯಲಿರುವ ದಸರಾ ಆಚರಣೆಗೆ ಸಿದ್ಧತೆ ನಡೆದಿದೆ