ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್)ದಲ್ಲಿನ ಡೆವಲಪ್ ಮೆಂಟ್ ಅಸಿಸ್ಟೆಂಟ್ ಒಟ್ಟು 177 ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 15 SEPTEMBER 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 10 OCT 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 177
Application Start Date: 15 SEP 2022
Application End Date: 10 0CT 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿಯನ್ನು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 450/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 50/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
Pay Scale:ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 14,650 ರೂ ವೇತನದ ಜೊತೆಗೆ ಭತ್ಯೆಯನ್ನು ನಿಗದಿಪಡಿಸಲಾಗಿದೆ.