ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/10/2022ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
No. of posts: 16
Application Start Date: 22 ಸೆಪ್ಟೆಂಬರ್ 2022
Application End Date: 19 ಅಕ್ಟೋಬರ್ 2022
Last Date for Payment: 21 ಅಕ್ಟೋಬರ್ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.
– ಜೊತೆಗೆ ಕೋಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 500/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC/ST, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
* SC/ ST/ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಗರಿಷ್ಠ 48 ವರ್ಷ ವಯೋಮಿತಿಯನ್ನು ಹೊಂದಿರಬೇಕು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 60,370/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.