ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1422 ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 1422
ಸರ್ಕಲ್ ಆಧಾರಿತ ಅಧಿಕಾರಿ : 1400
ಬ್ಯಾಕ್ ಲಾಗ್ ಹುದ್ದೆಗಳು : 22
No. of posts: 1422
Application Start Date: 18 ಅಕ್ಟೋಬರ್ 2022
Application End Date: 7 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/- ರೂ. ಅನ್ನು ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 36,000- 63,840/- ವೇತನ ನಿಗದಿಪಡಿಸಲಾಗಿದೆ.