ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ 10 ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಗಳು ಕೂಡಾ ಅರ್ಜಿಯನ್ನು ಸಲ್ಲಿಸಬಹುದು.
No. of posts: 10
Application Start Date: 20 ಅಕ್ಟೋಬರ್ 2022
Application End Date: 19 ನವೆಂಬರ್ 2022
Last Date for Payment: 23 ನವೆಂಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಅರಣ್ಯ ಶಾಸ್ತ್ರದಲ್ಲಿ ಪದವೀಧರರಾಗಿರಬೇಕು, ಅಥವಾ B.Sc, ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 320/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 120/- ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 31 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40,900/- ರಿಂದ 72,200/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.