* ಫುಟ್ಬಾಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಕತಾರ್ (Qatar) ಫಿಫಾ ವಿಶ್ವಕಪ್ ಅನ್ನು ಆಯೋಜಿಸಲು ಸಿದ್ಧವಾಗಿ ನಿಂತಿದೆ. ನವೆಂಬರ್ 20 ರಂದು ವಿಶ್ವಕಪ್ ಉದ್ಘಾಟನಾ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9:30ಕ್ಕೆ ಪ್ರಾರಂಭವಾಗುತ್ತದೆ.
* ಫಿಫಾ ವಿಶ್ವಕಪ್ 2022 ಫುಟ್ಬಾಲ್ (FIFA World Cup 2022) ಫುಟ್ಬಾಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಕತಾರ್ (Qatar) ವಿಶ್ವಕಪ್ ಅನ್ನು ಆಯೋಜಿಸಲು ಸಿದ್ಧವಾಗಿದೆ.
* ಆತಿಥೇಯ ರಾಷ್ಟ್ರ ಎನ್ನುವ ಕಾರಣಕ್ಕೆ ಕತಾರ್ಗೆ ನೇರ ಪ್ರವೇಶ ದೊರೆಯಿತು. ಈ ಬಾರಿಯ ಫುಟ್ಬಾಲ್ (Football) ಫೀವರ್ಗೆ ನವೆಂಬರ್ 20ಕ್ಕೆ ಚಾಲನೆ ಸಿಗಲಿದ್ದು ಡಿಸೆಂಬರ್ 18 ರಂದು ಕೊನೆಗೊಳ್ಳುತ್ತದೆ.
* ಫುಟ್ ಬಾಲ್ ಆಟಕ್ಕೆ 32 ತಂಡಗಳು ಭರದ ಸಿದ್ಧತೆಯಲ್ಲಿ ತೊಡಗಿವೆ. ಪ್ರತಿ ಗುಂಪಿನಲ್ಲಿ ಅಗ್ರ 2 ಸ್ಥಾನಗಳನ್ನು ಪಡೆಯುವ ತಂಡಗಳು ನಾಕೌಟ್ ಹಂತಕ್ಕೆ ಪ್ರವೇಶಿಸಲಿವೆ.
* 8 ಪ್ರಿ ಕ್ವಾರ್ಟರ್ ಫೈನಲ್, 4 ಕ್ವಾರ್ಟರ್ ಫೈನಲ್, 2 ಸೆಮಿಫೈನಲ್‌ಗಳ ಬಳಿಕ ಫೈನಲ್‌ಗೇರುವ ತಂಡಗಳು ಯಾವುವು ಎನ್ನುವುದು ನಿರ್ಧಾರವಾಗಲಿದೆ.
* ಕತಾರ್ ಈ ಬಾರಿಯ ವಿಶ್ವಕಪ್‌ಗಾಗಿ ಒಟ್ಟು 7 ಅತ್ಯಾಧುನಿಕ ಸ್ಟೇಡಿಯಂಗಳನ್ನು ನಿರ್ಮಿಸಿದೆ. 64 ಪಂದ್ಯಗಳು ಅಲ್ ಬೇತ್ ಸ್ಟೇಡಿಯಂ, ಖಲೀಫಾ ಇಂಟರ್ನ್ಯಾಷನಲ್ ಸ್ಟೇಡಿಯಂ, ಅಲ್ ಥುಮಾಮಾ ಸ್ಟೇಡಿಯಂ, ಅಹ್ಮದ್ ಬಿನ್ ಅಲಿ ಸ್ಟೇಡಿಯಂ, ಲುಸೈಲ್ ಸ್ಟೇಡಿಯಂ, ಸ್ಟೇಡಿಯಂ 974, ಎಜುಕೇಶನ್ ಸಿಟಿ ಸ್ಟೇಡಿಯಂ ಮತ್ತು ಅಲ್ ಜನೌಬ್ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆಯಲಿವೆ.
* ಅಲ್ ಬೇತ್ ಸ್ಟೇಡಿಯಂನಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಇಲ್ಲಿ ಸುಮಾರು 60,000 ಆಸನ ಸಾಮರ್ಥ್ಯವನ್ನು ಏರ್ಪಡಿಸಲಾಗಿದೆ.
* ಉದ್ಘಾಟನಾ ಸಮಾರಂಭವು ನವೆಂಬರ್ 20 ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತದೆ. ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಶುರುವಾಗಲಿದೆ.
* ಉದ್ಘಾಟನಾ ಸಮಾರಂಭಕ್ಕಾಗಿ ಪ್ರಸಿದ್ಧ ಬಾಯ್ ಬ್ಯಾಂಡ್‌ನ ಏಳು ಸದಸ್ಯರಲ್ಲಿ ಒಬ್ಬರಾದ ಜಂಗ್‌ಕುಕ್ ಪ್ರದರ್ಶನ ನೀಡಲಿದ್ದಾರೆ ಎಂದು ದಕ್ಷಿಣ ಕೊರಿಯಾದ ಬಿಟಿಎಸ್ ಹೇಳಿದೆ.
Subscribe to Updates
Get the latest creative news from FooBar about art, design and business.
Previous ArticleSSLC ಪಾಸಾದ ಅಭ್ಯರ್ಥಿಗಳಿಂದ ಬಾಗಲಕೋಟ ಜಿಲ್ಲಾ ಪಾಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Next Article PESA ಕಾಯ್ದೆಯನ್ನು ಜಾರಿಗೆ ತರಲು ಅಣಿಯಾಗಿರುವ ಮಧ್ಯಪ್ರದೇಶ