ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 550 ಫಾರ್ಮಸಿ ಅಧಿಕಾರಿಗಳು ಮತ್ತು ಕಿರಿಯ ಪ್ರಯೋಗಶಾಲೆ ತಾಂತ್ರಿಕ ಸಿಬ್ಬಂದ್ಧಿ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಹುದ್ದೆಗಳ ವಿವರ : 550
– ಫಾರ್ಮಸಿ ಅಧಿಕಾರಿಗಳು : 400
– ಕಿರಿಯ ಪ್ರಯೋಗಶಾಲೆ ತಾಂತ್ರಿಕ ಸಿಬ್ಬಂದ್ಧಿ : 150
* ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.