ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಆಫೀಸರ್ (Scale-I) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಗಳನ್ನು ಗಮನಿಸಿ.
Application Start Date: 31 ಡಿಸೆಂಬರ್ 2022
Application End Date: 10 ಜನವರಿ 2023
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST ಅಭ್ಯರ್ಥಿಗಳು 700/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳೀಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 01/12/2022 ಕ್ಕೆ ಅನ್ವಯವಾಗುವಂತೆ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 84,000/- ರೂ ಗಳನ್ನು ನಿಗದಿಪಡಿಸಲಾಗಿದೆ.