* ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ “ರೈತ ಶಕ್ತಿ ಯೋಜನೆ’ ಶೀಘ್ರವೇ ಚಾಲನೆ ಸಿಗಲಿದೆ.
* ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 – 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
* ಪ್ರತಿ ಎಕರೆಗೆ ರೂ 250 /– ಗಳಂತೆ ಗರಿಷ್ಠ ಐದು ಎಕರೆಗೆ 1250 /- ರೂ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು “ರೈತ ಶಕ್ತಿ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು , ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.
* ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು, ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು . ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.
Subscribe to Updates
Get the latest creative news from FooBar about art, design and business.
Previous Articleಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ
Next Article ಭಾರತಕ್ಕೆ 317 ರನ್ ದಾಖಲೆ ಅಂತರದ ಭರ್ಜರಿ ಗೆಲುವು