ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಘಟಕದಲ್ಲಿ ಖಾಲಿ ಇರುವ 68 ಶೀಘ್ರಲಿಪಿಗಾರ, ಆದೇಶ ಜಾರಿಕಾರ ಮತ್ತು ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/03/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 68
* ಶೀಘ್ರಲಿಪಿಗಾರ : 18
*ಆದೇಶ ಜಾರಿಕಾರ : 6
* ಸಿಪಾಯಿ : 44
ಪ್ರಮುಖ ದಿನಾಂಕಗಳು :
– ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 07/02/2023
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2023
– ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 07/03/2023
No. of posts: 68
Application Start Date: 7 ಫೆಬ್ರುವರಿ 2023
Application End Date: 3 ಮಾರ್ಚ್ 2023
Last Date for Payment: 7 ಮಾರ್ಚ್ 2023
Work Location: ಬೆಳಗಾವಿ ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
* ಶೀಘ್ರಲಿಪಿಗಾರ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಸಿಪಾಯಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ ಹುದ್ದೆಗಳಿಗೆ – ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸಿಪಾಯಿ ಹುದ್ದೆಗಳಿಗೆ -ಎಸ್.ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ .
– ಶೀಘ್ರಲಿಪಿಗಾರ ಹುದ್ದೆಗಳಿಗೆ ರೂ. 300/- ಅರ್ಜಿ ಶುಲ್ಕ
– ಆದೇಶ ಜಾರಿಕಾರ ಹುದ್ದೆಗಳಿಗೆ ರೂ. 250/- ಅರ್ಜಿ ಶುಲ್ಕ
– ಸಿಪಾಯಿ ಹುದ್ದೆಗಳಿಗೆ ರೂ. 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಂಕೆಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಶೀಘ್ರಲಿಪಿಗಾರ : 27,650/- ರಿಂದ 52,650/-
*ಆದೇಶ ಜಾರಿಕಾರ : 19,950/- ರಿಂದ 37,900
* ಸಿಪಾಯಿ : 17,000/- ರಿಂದ 28,950