* ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡ ಸಾಹಿತ್ಯದಲ್ಲಿ ವಿವಿಧ ರೀತಿಯಾಗಿ ಸಾಧನೆ ಮಾಡಿದವರನ್ನು ಗುರುತಿಸಿ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ.
* 2020-21ನೇ ಸಾಲಿಗೆ ಹಿರಿಯ ಸಾಹಿತಿ-ಸಾಹಿತ್ಯ ಸಂಶೋಧಕ ಮೈಸೂರಿನ ಪ್ರೊ.ಸಿ.ಪಿ.ಕೃಷ್ಣಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
* 2021-22ನೇ ಸಾಲಿಗೆ ಬರಹಗಾರ ಡಾ.ಬಾಬು ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೂ 2022-23ನೇ ಸಾಲಿಗೆ ಸಾಹಿತಿ ಹಾಗೂ ಪತ್ರಕರ್ತ ಡಾ.ಎಸ್.ಆರ್. ರಾಮಸ್ವಾಮಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
* ಮೂರು ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಸರ್ಕಾರ ಕೊಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಪ್ರಶಸ್ತಿಯನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಶೀಲಿಸಿ ಪ್ರಕಟಿಸುತ್ತಿದೆ.
* ಬನವಾಸಿಯಲ್ಲಿ ಫೆಬ್ರುವರಿ 28 ಹಾಗೂ ಮಾರ್ಚ್ 1ರಂದು ನಿಗದಿಯಾದ ರಾಜ್ಯಮಟ್ಟದ ಕದಂಬೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.
* ಕುವೆಂಪು, ಶಿವರಾಮ ಕಾರಂತ, ಪುತಿನ, ಕೆ.ಎಸ್.ನರಸಿಂಹಸ್ವಾಮಿ, ಪೂರ್ಣಚಂದ್ರ ತೇಜಸ್ವಿ, ಎಸ್.ಎಲ್.ಭೈರಪ್ಪ, ನಿಸಾರ್ ಅಹ್ಮದ್, ಯಶವಂತ ಚಿತ್ತಾಲ ಸೇರಿದಂತೆ 33 ಸಾಹಿತಿಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಉಸ್ತಾದ್ ಬಿಸ್ಮಿಲ್ಲಾ ಖಾನ್ ರವರಿಗೆ ಯುವ ಪುರಸ್ಕಾರ್