ಪ್ರಧಾನಿ ಮೋದಿ ಅವರಿಗೆ ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಮಂಗಳವಾರ (ಆಗಸ್ಟ್ 1) ಪ್ರದಾನ ಮಾಡಲಾಗುತ್ತದೆ.
ಇದೇ ಸಂದರ್ಭದಲ್ಲಿ ಅವರು ದಗಡೂಶೇಠ ಮಂದಿರದಲ್ಲಿ ಪೂಜೆ ನೆರವೇರಿಸಿದ ನಂತರ ಎರಡು” ಮೆಟ್ರೋ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
“ಲೋಕಮಾನ್ಯ ತಿಲಕ್ ರಾಷ್ಟ್ರ ಪ್ರಶಸ್ತಿ”ಗೆ ಭಾಜನರಾಗಿರುವ ಪ್ರಧಾನಿ ಮೋದಿ ಅವರು ಪ್ರಶಸ್ತಿ ಪಡೆದ 41ನೇ ವ್ಯಕ್ತಿಯಾಗಲಿದ್ದಾರೆ.
ಪುಣೆ ಮೆಟ್ರೋ ಹಂತ 1 ರ ಎರಡು ಕಾರಿಡಾರ್‌ಗಳ ಪೂರ್ಣಗೊಂಡ ವಿಭಾಗಗಳಲ್ಲಿ ಸೇವೆಗಳ ಉದ್ಘಾಟನೆಯನ್ನು ಗುರುತಿಸುವ ಮೂಲಕ ಮೋದಿ ಅವರು ಮೆಟ್ರೋ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಈ ವಿಭಾಗಗಳು ಫುಗೆವಾಡಿ ನಿಲ್ದಾಣದಿಂದ ಸಿವಿಲ್ ಕೋರ್ಟ್ ಸ್ಟೇಷನ್ ಮತ್ತು ಗಾರ್ವೇರ್ ಕಾಲೇಜು ನಿಲ್ದಾಣದಿಂದ ರೂಬಿ ಹಾಲ್ ಕ್ಲಿನಿಕ್ ನಿಲ್ದಾಣದವರೆಗೆ ಇವೆ ಎಂದು ಹೇಳಿದೆ.