ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿಯ ದಸರಾ ಮಹೋತ್ಸವವು ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿದೆ.
ಅಕ್ಟೋಬರ್15ರಂದು ಬೆಳಿಗ್ಗೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮೂಲಕ ಹಂಸಲೇಖ ಅವರು ದಸರಾ ಅಚರಣೆಗೆ ಚಾಲನ ನೀಡಲಿದ್ದಾರೆ.
ಕಳೆದ ಬಾರಿಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉತ್ಸವವನ್ನು ಉದ್ಘಾಟಿಸಿದ್ದರು.