ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21, 22 ರಂದು ನಡೆಯಲಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ 48 ನೇ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲಾಗಿತ್ತು.
ಹಾಗೂ 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ.ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ಇದೀಗ 3 ನೇ ಭಾರಿ ಮಂಡ್ಯದಲ್ಲಿ 87 ನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.