ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈಗಾಗಲೇ ಅಧಿಸೂಚಿಸಲಾದ ಗ್ರಾಮ ಆಡಳಿತ ಅಧಿಕಾರಿ (Village Administrative Officer) 1,000 ಹುದ್ದೆಗಳ ನೇಮಕಾತಿಗೆ ಮತ್ತು ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿನ 76 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಕಡ್ಡಾಯ ಕನ್ನಡ ಪರೀಕ್ಷೆಯು ದಿನಾಂಕ 29 ಸೆಪ್ಟೆಂಬರ್ 2024ರ ರಂದು ನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು Download ಮಾಡಿಕೊಳ್ಳಬಹುದಾಗಿದೆ.