ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.
ಅಂತಾರಾಷ್ಟ್ರೀಯ ಸಮುದಾಯದಲ್ಲಿ ಪ್ರವಾಸೋದ್ಯಮದ ಪಾತ್ರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.
* 2024 ಸೆಪ್ಟೆಂಬರ್ 27 ವಿಶ್ವ ಪ್ರವಾಸೋದ್ಯಮ ದಿನದ ಥೀಮ್ ‘ಟೂರಿಸಂ ಅಂಡ್ ಪೀಸ್’ (ಪ್ರವಾಸೋದ್ಯಮದ ಮತ್ತು ಶಾಂತಿ)ಎಂಬುವುದಾಗಿದೆ.
1979 ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ವರ್ಡ್ ಟೂರಿಸಂ ಆರ್ಗನೈಜೇಷನ್ (UNWTO) ಶಾಸನಗಳನ್ನು ಅಂಗೀಕರಿಸಿತ್ತು. 1980 ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲು ಗೊತ್ತುವಳಿಗಳನ್ನು ಅಂಗೀಕರಿಸಿತು ಅಂದಿನಿಂದ ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ ಏಕೆಂದರೆ ಈ (ಸೆಪ್ಟೆಂಬರ್ 27) ದಿನಾಂಕವು UNWTO ನ ಶಾಸನಗಳನ್ನು ಅಳವಡಿಸಿಕೊಂಡ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.
ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಪ್ರತಿ ವರ್ಷ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರವಾಸೋದ್ಯಮ ಭಾರತದಲ್ಲಿ ಅತಿ ದೊಡ್ಡ ಸೇವಾ ವಲಯವಾಗಿದೆ. ಇದು ರಾಷ್ಟ್ರೀಯ ಜಿಡಿಪಿಗೆ ಶೇ.6.23ರಷ್ಟು ಕೊಡುಗೆ ನೀಡುತ್ತದೆ.
ಭಾರತದಲ್ಲಿ ಒಟ್ಟು ಉದ್ಯೋಗ ಸೃಷ್ಟಿಯಲ್ಲಿ ಶೇ.8.78ರಷ್ಟು ಕೊಡುಗೆ ನೀಡುತ್ತದೆ. ವಾರ್ಷಿಕ 5 ದಶಲಕ್ಷಕ್ಕಿಂತ ಹೆಚ್ಚು ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡುತ್ತಾರೆ. ಅಂತೆಯೇ 562 ದಶಲಕ್ಷ ದೇಶೀಯ ಪ್ರವಾಸಿಗರು ಭೇಟಿ ನೀಡಿದ್ದಾರೆ.