* ಜಾಗತಿಕ ಆರ್ಥಿಕತೆ ಹಿನ್ನಡೆಯಲ್ಲಿದ್ದರೂ ಭಾರತದ ಆರ್ಥಿಕ ಬೆಳವಣಿಗೆ ಮುನ್ನಡೆ ಕಾಯ್ದುಕೊಂಡಿದೆ ಎಂದಿರುವ ವಿಶ್ವಬ್ಯಾಂಕ್, 2022-23ನೇ ಸಾಲಿನಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ ದರ (ಜಿಡಿಪಿ) ಶೇ.6.9 ಇರಲಿದೆ ಎಂದು ಅಂದಾಜು ಮಾಡಿದೆ.
* ಈ ಹಿಂದೆ ಭಾರತದ ಜಿಡಿಪಿಯನ್ನು ಶೇ.6.5ಕ್ಕೆ ಇಳಿಸಿತ್ತು. ಜಾಗತಿಕ ಆರ್ಥಿಕ ಬೆಳವಣಿಗೆ ಹೋಲಿಕೆ ಮಾಡಿದಾಗ ಎರಡನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ.0.3 ರಷ್ಟು ಏರಿಕೆಯಾಗಿದೆ. ಹೀಗಾಗಿ ಜಿಡಿಪಿಯನ್ನು ಪರಿಷ್ಕರಿಸಲಾಗಿದೆ ಎಂದು ವಿಶ್ವಬ್ಯಾಂಕ್ ವಿವರಣೆ ನೀಡಿದೆ. ಆರ್ಥಿಕ ಪ್ರಗತಿಯಲ್ಲಿ ಕುಂಠಿತ ಕಾಣಲಿವೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿರುವ ಪಟ್ಟಿಯಲ್ಲಿ ಚೀನಾ, ಅಮೆರಿಕ ಹಾಗೂ ಯುರೋಪ್ ದೇಶಗಳು ಇವೆ.
Subscribe to Updates
Get the latest creative news from FooBar about art, design and business.
Next Article ಬಿಬಿಸಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯರು