ವಿಜಯಪುರ ಭಾರತ ತಾಂತ್ರಿಕ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿಯನ್ನು ಸಾಧಿಸುತ್ತಿದ್ದು, ಕೌಶಲ ಇಂಜಿನಿಯರ್ಗಳ ಅವಶ್ಯಕತೆ ಅಧಿಕವಾಗಿದೆ. ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದತ್ತ ಹೆಚ್ಚಿನ ಗಮನಹರಿಸಿದರೆ ಅವರ ಭವಿಷ್ಯ ಉಜ್ವಲವಾಗುವುದು ಎಂದು ಬಾಗಲಕೋಟೆ ಹೆಸ್ಕಾಂ ಅಧೀಕ್ಷಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಜಿ. ಹಿರೇಮಠ ಹೇಳಿದರು. ವಿಜಯವಾಣಿ ಚಿತ್ರ
ನಗರದ ಸಿಕ್ಯಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಕೆಇಬಿ ವಿದ್ಯುತ್ ಉತ್ಪಾದನೆ ಮತ್ತು ಸರಬರಾಜಿನ ಪ್ರಗತಿಯ ಬಗ್ಗೆ ತಿಳಿವಳಿಕೆ ನೀಡಿ, ಎಲೆಕ್ಟಿಕಲ್ ಇಂಜಿನಿಯರ್ ವೃತ್ತಿಯ ಅವಕಾಶಗಳ ಬಗ್ಗೆ ವಿಕೃತ ಮಾಹಿತಿ ನೀಡಿದರು.
ಸಿಕ್ಯಾಬ್ ಸಂಸ್ಥೆ ಅಧ್ಯಕ್ಷ ಎಸ್.ಎ. ಪುಣೀಕರ್ ಮಾತನಾಡಿ, ಸಿಕ್ಯಾಬ್ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿ, ಬಡ ವಿದ್ಯಾರ್ಥಿಗಳ ಅಭ್ಯುದಯಕ್ಕೆ
ವಿಜಯಪುರ ನಗರದ ಸಿಕ್ಯಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಂತ್ರಿಕ-ಸಾಂಸ್ಕೃತಿಕ ಉತ್ಸವವನ್ನು ಬಾಗಲಕೋಟೆ ಹೆಸ್ಕಾಂ ಅಧೀಕ್ಷಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕೆ.ಜಿ. ಹಿರೇಮಠ ಉದ್ಘಾಟಿಸಿದರು. ಸಿಕ್ಯಾಬ್ ಸಂಸ್ಥೆ ಅಧ್ಯಕ್ಷ ಎಸ್.ಎ. ಪುಣೇಕರ್, ನಿರ್ದೇಶಕ ಸಲಾಹುದ್ದೀನ್ ಪುಣೇಕರ, ಪ್ರಾಂಶುಪಾಲ ಡಾ. ಆರ್.ಬಿ. ಕದಿರನಾಯ್ಕರ್ ಇತರರಿದ್ದರು. ಶ್ರಮಿಸುತ್ತಿದೆ ಎಂದರು.
ನಿರ್ದೇಶಕ ಸಲಾಹುದ್ದೀನ್ ಪುಣೇಕರ ಕದಿರನಾಯ್ಕರ್ ಮಾತನಾಡಿ, ಮಾಡುವ ಕಾಯಕದಲ್ಲಿ ಪ್ರಾಮಾಣಿಕತೆ ಮೈಗೂಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ನಿಶ್ಚಿತ. ವಿದ್ಯಾರ್ಥಿಗಳು ಕುರಿಯ ಮಂದೆಯಂತಾಗದೇ, ವಿವೇಚನೆ ಯಿಂದ ಮುಂದಿನ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.