* 7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡಲು ರಚನೆಗೆ ಅನುಮೋದನೆ ನೀಡಲಾಗಿದೆ.
* ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿರುವ ಏಳನೇ ವೇತನ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಮುಖ್ಯಕಾರ್ಯದಶಿ ಸುಧಾಕರ್ ರಾವ್ ಮೂವರು ಸದಸ್ಯರನ್ನು ನೇಮಕ ಮಾಡಲಾಗಿದೆ.
* ಈ ಆಯೋಗದಲ್ಲಿ ಸುಧಾಕರ್ ರಾವ್ ರವರು ಅಧ್ಯಕ್ಷತೆ ವಹಿಸುವದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಘೋಷಣೆ ಮಾಡಿದ್ದರು ಹಾಗೂ ಆಯೋಗದ ರಚನೆಗೆ ನವೆಂಬರ್ 18 ರಂದು ಅನುಮೋದನೆ ನೀಡಲಾಗಿತ್ತು.
* ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ.ರಾಮಮೂರ್ತಿ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್.ಬಿ.ವನಹಳ್ಳಿ ಸದಸ್ಯರಾಗಿದ್ದಾರೆ, ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
* 7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ (ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ)ಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ಕಾರ್ಯಸಾಧುವಾದ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡುವುದು.
* ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸುವುದು, ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡಲಿದೆ.
Subscribe to Updates
Get the latest creative news from FooBar about art, design and business.
Previous Article‘ಡಿಜಿಟಲ್ ಶಕ್ತಿ 4.0’ ಅನ್ನು ಪ್ರಾರಂಭಿಸಿದ ರಾಷ್ಟ್ರೀಯ ಮಹಿಳಾ ಆಯೋಗ (NCW)