Subscribe to Updates
Get the latest creative news from FooBar about art, design and business.
Author: Web Desk
ಬಾಗಲಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 04 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ. No. of posts: 4 Application Start Date: 22 ಆಗಸ್ಟ್ 2024 Application End Date: 6 ಸೆಪ್ಟೆಂಬರ್ 2024 Work Location: ಬಾಗಲಕೋಟೆ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು PUC/ ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿರಬೇಕು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.-ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 500/- ರೂಪ್ರವರ್ಗ 2(ಎ), 2(ಬಿ),…
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ನಿರ್ವಾಹಕರು (Conductor) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ KEA ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಯು 2024 ಸೆಪ್ಟೆಂಬರ್- 01 ರಂದು ನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ. To Download Hall Ticket
ಹಲವು ವರ್ಷಗಳಿಂದ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದ, ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಪಿಯು ಇಲಾಖೆಯು ಪ್ರಸ್ತಾವನೆ ಸಲ್ಲಿಸಿದ್ದು, ಒಟ್ಟು 4,259 ಉಪನ್ಯಾಸಕರ ಹುದ್ದೆಗಳು ಭರ್ತಿಯಾಗಬೇಕಿದ್ದು, ಪ್ರಸ್ತುತ 824 ಹುದ್ದೆಗಳ ನೇಮಕಾತಿಗೆ ಗುರುತಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 36 ಹುದ್ದೆಗಳು, ಹಾಗೂ ಕರ್ನಾಟಕೇತರ ಪ್ರದೇಶಕ್ಕೆ 776 ಹುದ್ದೆಗಳನ್ನು ಗುರುತಿಸಲಾಗಿದೆ. ಹುದ್ದೆಗಳ ವಿವರ : 824- ಅರ್ಥಶಾಸ್ತ್ರ ಉಪನ್ಯಾಸಕರು – 184 – ಇಂಗ್ಲಿಷ್ – 125 – ಇತಿಹಾಸ – 124 – ಕನ್ನಡ – 105 – ವಾಣಿಜ್ಯಶಾಸ್ತ್ರ – 100- ರಾಜ್ಯಶಾಸ್ತ್ರ – 79- ಸಮಾಜಶಾಸ್ತ್ರ – 79- ಭೂಗೋಳಶಾಸ್ತ್ರ – 20- ಮನಃ ಶಾಸ್ತ್ರ – 02- ಕಂಪ್ಯೂಟರ್ ಸೈನ್ಸ್ – 06 * ಈ ಕುರಿತು ಮಾನ್ಯ ಶಿಕ್ಷಣ ಸಚಿವರು ಕೂಡ ಅಧಿಕೃತವಾಗಿ…
ಸರ್ಕಾರ ಪ್ರಮಾಣೀಕರಿಸಿದ ಅತ್ಯಾಧುನಿಕ ಕಂಪ್ಯೂಟರ್ ಸಾಫ್ಟ್‌ವೇರ್ ಕೋರ್ಸ್‌ಗಳ ತರಬೇತಿಗಾಗಿ ರಾಷ್ಟ್ರೀಯ ಕೌಶಲ ಅಕಾಡೆಮಿಯಿಂದ ಅರ್ಜಿ ಆಹ್ವಾನಿಸಲಾಗಿದೆ. 12 ತರಗತಿ ಉತ್ತೀರ್ಣರಾದವರು, ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಎಂಬಿಎ, ಪಾಲಿಟೆಕ್ನಿಕ್ ಡಿಪ್ಲೊಮಾ ಮಾಡಿರುವವರಿಗೆ ಮಾಹಿತಿ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಸಾಫ್ಟ್‌ವೇರ್ ತಂತ್ರಜ್ಞಾನದ ಕುರಿತಾದ ಕೌಶಲಗಳನ್ನು ವೃದ್ಧಿಸಿ ಕೊಳ್ಳಲು ಇದೊಂದು ಉತ್ತಮ ಅವಕಾಶ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ. ತರಬೇತಿ ಮುಗಿದ ಬಳಿಕ ಪರೀಕ್ಷೆ ನಡೆಸಿ ಸರ್ಕಾರದಿಂದ ಪ್ರಮಾಣ ಪತ್ರವನ್ನೂ ನೀಡಲಾಗುತ್ತದೆ. ಈ ಕೋರ್ಸ್ 2ರಿಂದ 6 ತಿಂಗಳದ್ದಾಗಿದೆ. ಸ್ವರ್ಣ ಭಾರತ್ ರಾಷ್ಟ್ರೀಯ ಅಭಿವೃದ್ಧಿ ಮಟ್ಟದ ಕೌಶಲ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ಮಹಿಳೆಯರು, ಸೇನೆಯಿಂದ ನಿವೃತ್ತರಾದವರು ಮತ್ತು ಅವರ ಮಕ್ಕಳಿಗೆ ಶುಲ್ಕದಲ್ಲಿ ಶೇ80ರಷ್ಟು ಸಹಾಯಧನವೂ ಸಿಗಲಿದೆ. www.nationalskillacademy. in. ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸ ಬೇಕಾದ ದೂರವಾಣಿ 9505800050 ಮತ್ತು 9505800047
ಲೇಖಕಿ ಮತ್ತು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೆ ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನಿಂದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಲಾಗಿದೆ. ಲೋಕಮಾನ್ಯ ತಿಲಕರ 104ನೇ ಪುಣ್ಯತಿಥಿಯ ನೆನಪಿಗಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಹಾರಾಷ್ಟ್ರ ತಿಲಕ್ ಸ್ಮಾರಕ್ ಟ್ರಸ್ಟ್‌ನಿಂದ ಸಮಾರಂಭವು ಆಗಸ್ಟ್ 1 ರಂದು ನವದೆಹಲಿಯ ಮಹಾರಾಷ್ಟ್ರ ಸದನದಲ್ಲಿ ನಡೆಯಲಿದೆ, ಶರದ್ ಪವಾರ್, ಡಾ. ಶಾಹು ಛತ್ರಪತಿ ಮಹಾರಾಜ್, ಮತ್ತು ರಮೇಶ್ ಚೆನ್ನಿತ್ತಲ ಸೇರಿದಂತೆ ಪ್ರಮುಖ ಅತಿಥಿಗಳು. ಪ್ರಶಸ್ತಿಯು ಸ್ಮರಣ ಫಲಕ ಮತ್ತು ಒಂದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ. ಕಾರ್ಯಕ್ರಮದಲ್ಲಿ ಡಾ. ಪ್ರಣತಿ ರೋಹಿತ್ ತಿಲಕ್ ಅವರು ಬರೆದ “ಲೆಜೆಂಡರಿ ಲೋಕಮಾನ್ಯ” ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕವು ಲೋಕಮಾನ್ಯ ತಿಲಕರ ಜೀವನದಲ್ಲಿನ ಮಹತ್ವದ ಘಟನೆಗಳನ್ನು ಎತ್ತಿ ತೋರಿಸುತ್ತದೆ 1983 ರಿಂದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯು ರಾಷ್ಟ್ರಕ್ಕೆ ನಿಸ್ವಾರ್ಥವಾಗಿ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗೌರವಿಸಲು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 5,500 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಸಿದ್ಧತೆ ನಡೆದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿರುತ್ತಾರೆ. ಸರಕಾರಿ ಪ್ರಾಥಮಿಕ, ಪದವಿಪೂರ್ವ ಕಾಲೇಜುಗಳಿಗೆ ಮತ್ತು ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ಒಟ್ಟಾರೆ 5,500 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ಕೋರಿ ಈ ನೇಮಕ ಪ್ರಕ್ರಿಯೆಗೆ ಹಣಕಾಸು ಇಲಾಖೆಯ ಒಪ್ಪಿಗೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಅನುಮತಿ ಸಿಕ್ಕ ತಕ್ಷಣ ಅಧಿಸೂಚನೆ ಪ್ರಕಟಿಸಲಿದೆ. ದೈಹಿಕ ಶಿಕ್ಷಣ ಮಾತ್ರವಲ್ಲ, ಚಿತ್ರಕಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇಲಾಖೆಗೆ 40 ಸಾವಿರ ಶಿಕ್ಷಕರ ಅಗತ್ಯವಿದ್ದು, ಹಂತ ಹಂತವಾಗಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಒಟ್ಟು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು : 5,500 ರಾಜ್ಯದ ಪ್ರಾಥಮಿಕ ಶಾಲೆಗಳಿಗೆ : 2,000 ಪ್ರೌಢಶಾಲೆಗಳಿಗೆ : 1,500 ಪದವಿಪೂರ್ವ ಕಾಲೇಜುಗಳಿಗೆ : 2,000
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಅದರಂತೆ, ಮುಂಬರುವ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗೆ ವಿವಿಧ ದಿನಾಂಕಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದೆ. ಈ ಹಿಂದೆ ಅಧಿಸೂಚನೆಯಲ್ಲಿ ತಿಳಿಸಿದ್ದಕ್ಕಿಂತ ಬೇರೆ ದಿನಾಂಕಗಳಂದು ನಡೆಸಲು ಪರೀಕ್ಷೆಯನ್ನು ನಡೆಸಲು ನಿರ್ಧರಿಸಿ ಪರಿಷ್ಕೃತ ಪರೀಕ್ಷಾ ವೇಳಾ ಪಟ್ಟಿಯನ್ನು KPSCಯು ಪ್ರಕಟಿಸಿದೆ.
ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 16 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಜುಲೈ 2024
ದಕ್ಷಿಣ ಭಾರತದ ಮೊದಲ ಮತ್ತು ದೇಶದ ಅತಿದೊಡ್ಡ ಚಿರತೆ ಸಫಾರಿಯನ್ನು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ಜೂನ್ 26 ರಂದು ಉದ್ಘಾಟಿಸಿದ್ದಾರೆ. ಸಫಾರಿಗಳಿಗಾಗಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ ಸಫಾರಿಗಾಗಿ 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ಬೇಲಿ ಹಾಕಲಾಗಿದೆ. ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದೆ. ಸದ್ಯ 8 ಚಿರತೆಗಳನ್ನು ತೆರೆದ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದ್ದು, ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ.
ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನು ಪ್ರತಿ ವರ್ಷ ಜುಲೈ 3 ರಂದು ಆಚರಿಸಲಾಗುತ್ತದೆ. ಪರಿಸರದ ಮೇಲೆ ಬಿಸಾಡಬಹುದಾದ ಪ್ಲಾಸ್ಟಿಕ್ ಚೀಲಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 3 ರಂದು ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡಲು ಮತ್ತು ಹೆಚ್ಚು ಸಮರ್ಥನೀಯ ಪರ್ಯಾಯಗಳನ್ನು ಅನ್ವೇಷಿಸಲು ಜಾಗತಿಕವಾಗಿ ವ್ಯಕ್ತಿಗಳು, ಸಮುದಾಯಗಳು ಮತ್ತು ವ್ಯವಹಾರಗಳಿಗೆ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಆಸ್ಟ್ರೇಲಿಯಾ ಮೂಲದ ಮಿಂಡರೂ ಫೌಂಡೇಶನ್‌ನ ವರದಿಯ ಪ್ರಕಾರ, ಏಕ-ಬಳಕೆಯ ಪ್ಲಾಸ್ಟಿಕ್‌ನಿಂದ ಭಾರತದಲ್ಲಿ ಪ್ರತಿ ವ್ಯಕ್ತಿಯಿಂದ 4 ಕೆ.ಜಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ ಎಂದು ಹೇಳಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಪ್ರಕಾರ, 2022-23 ರವರೆಗೆ, ರಾಜ್ಯದಲ್ಲಿ ವಾರ್ಷಿಕವಾಗಿ 2.96 ಲಕ್ಷ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದೆ.