Subscribe to Updates
Get the latest creative news from FooBar about art, design and business.
Author: Web Desk
* ಮತ್ತೊಂದು ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ.* ಬೆಟ್ಟ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರುವ ಬಗ್ಗೆ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರವು ಒಪ್ಪಿಗೆ ನೀಡಿದೆ. * ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಸಮೀಪದಲ್ಲಿ ಬೆಟ್ಟದ ಕುರುಬರು ವಾಸವಾಗಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. * ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.
* ಕನ್ನಡಿಗ ರಾಬಿನ್ ಉತ್ತಪ್ಪ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. * ಉತ್ತಪ್ಪ 2006 ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇವರು ಡ್ರಾಪಿಂಗ್ ಬ್ಯಾಟರ್ ಎಂದೇ ಪ್ರಸಿದ್ದರಾಗಿದ್ದಾರೆ. * ಇವರು ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿ, ನನ್ನ ಕುಟುಂಬದೊಂದಿಗೆ ಸಮಯ ಕಳೆಯುವದೇ ನನ್ ಜೀವನದಲ್ಲಿ ಹೊಸದೊಂದು ಅಧ್ಯಾಯ ಆರಂಭಿಸುತ್ತಿರುವೆ ಎಂದು ಹೇಳಿಕೊಂಡಿದ್ದಾರೆ. * ಕೊಡಗಿನ ಕುವರ ರಾಬಿನ್ ಉತ್ತಪ್ಪ ಅವರು ಬಲಗೈ ಬ್ಯಾಟರ್ ಮತ್ತು ವಿಕೆಟ್ ಕೀಪರ್ ಆಗಿದ್ದರು. * ರಾಬಿನ್ ಉತ್ತಪ್ಪ ಅವರು 46 ಏಕದಿನ ಪಂದ್ಯಗಳನ್ನು, 13 ಟಿ20 ಗೇಮಗಳನ್ನು, 142 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು 203 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ. * ನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಆದರೆ, ಪ್ರತಿಯೊಂದು ಒಳ್ಳೆಯ ವಿಷಯಕ್ಕೂ ಅಂತ್ಯವೆನ್ನುವುದು ಇದ್ದೆ ಇರುತ್ತದೆ. * ಉತ್ತಪ್ಪ ಗುವಾಹಟಿಯಲ್ಲಿ ಇಂಗ್ಲೆಂಡ್…
* ಕನ್ನಡದ ಕಡ್ಡಾಯ ಬಳಕೆಗೆ ಕಾನೂನಿನ ಬಲ ನೀಡಲು ಹೊಸ ಕಾಯ್ದೆಯನ್ನು ಜಾರಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿಂದು ಘೋಷಿಸಿದರು.* ಕನ್ನಡ ಕಡ್ಡಾಯಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ನೀಡಲು ‘ಕನ್ನಡ ಬಳಕೆ ಕಡ್ಡಾಯ’ ಕಾನೂನನ್ನು ಜಾರಿ ಮಾಡುತ್ತಿದ್ದೇವೆ. ಪ್ರಥಮ ಬಾರಿಗೆ ಇಂತಹ ಒಂದು ಕಾನೂನನ್ನು ಜಾರಿ ಮಾಡಲಾಗುತ್ತಿದೆ.* * ಪ್ರಮುಖ ಅಂಶಗಳು : – – 1 ರಿಂದ 10 ತಗತಿಯ ವರೆಗೆ ಕರ್ನಾಟಕ ಮತ್ತು ಹೊರ ರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಎಲ್ಲರಿಗೂ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು.- ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರಗಳು, ಶಾಸನಬದ್ಧ ಮತ್ತು ಶಾಸನಬದ್ಧವಲ್ಲದ ನಿಕಾಯಗಳು, ಸಹಕಾರಿ ಸಂಘಗಳು, ರಾಜ್ಯದಲ್ಲಿ ಇತರ ಸಂಘಗಳಲ್ಲಿ ನೇಮಕಾತಿ ಪಡೆಯಲು ಕನ್ನಡ ಭಾಷಾ ಜ್ಞಾನ ಕಡ್ಡಾಯ.- ಅಧೀನ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಮಂಡಳಿ ಗಳಲ್ಲಿ ಕನ್ನಡ ಭಾಷೆಯನ್ನು ಬಳಸಬೇಕು.- ಕನ್ನಡಿಗರಿಗೆ ಉದ್ಯೋಗ ಸೃಜಿಸಲು ಪ್ರತ್ಯೇಕ ಪೋರ್ಟಲ್ ಅನ್ನು ಸ್ಥಾಪಿಸುವುದು.- ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರು, ವ್ಯಾಪಾರಸ್ಥರು ಕಾಯ್ದೆ ಉಲ್ಲಂಘಿಸಿದರೆ…
ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್)ದಲ್ಲಿನ ಡೆವಲಪ್ ಮೆಂಟ್ ಅಸಿಸ್ಟೆಂಟ್ ಒಟ್ಟು 177 ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 15 SEPTEMBER 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 10 OCT 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. No. of posts: 177 Application Start Date: 15 SEP 2022 Application End Date: 10 0CT 2022 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿಯನ್ನು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 450/- ಪರಿಶಿಷ್ಟ…
* ರಾಜ್ಯದಾದ್ಯಂತ ಈ ಯೋಜನೆ ಅಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲೇ ಮಧ್ಯಾಹ್ನ ಪೌಷ್ಟಿಕ ಬಿಸಿಯೂಟ ನೀಡಲಾಗುತ್ತಿದೆ.* ಮಾತೃಪೂರ್ಣ ಯೋಜನೆ ಅಡಿಯಲ್ಲಿ ಗುಡ್ಡಗಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಮನೆಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ. * ಈ ವರ್ಷದ ಮಳೆಗಾಲ ಮುಗಿಯುವವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ತಿಳಿಸಿದರು.* ಮನೆಗೆ ಆಹಾರ ಪದಾರ್ಥಗಳನ್ನು ತಲುಪಿಸಿದರೆ ಗರ್ಭಿಣಿಯರಿಗೆ CA ದೊರೆಯುವುದಿಲ್ಲ. ಇದರಿಂದ, ಅಪೌಷ್ಠಿಕತೆಯಿಂದ ಬಳಲುತ್ತಾರೆ ಎನ್ನುವ ದೂರುಗಳಿದ್ದವು. ಹೀಗಾಗಿಯೇ ಅಂಗನವಾಡಿ ಕೇಂದ್ರಗಳಲ್ಲೇ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ.
* ಭಾರತವು ಡಿಸೆಂಬರ್ 1 ರಿಂದ 2023 ರ ನವೆಂಬರ್ 30 ರವರೆಗೆ ಜಿ-20 ಅಧ್ಯಕ್ಷ ಸ್ಥಾನವನ್ನು ವಹಿಸಲಿದೆ, ಭಾರತ ಈ ಸಮಯದಲ್ಲಿ ಜಿ-20 ಗೆ ಸಂಬಂಧಿಸಿದ 200 ಸಭೆಗಳನ್ನು ಆಯೋಜಿಸುವ ಗುರಿ ಹೊಂದಿದೆ. * ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸುವ ಪ್ರಕಾರ ಜಿ-20 ನಾಯಕರ ಶೃಂಗಸಭೆಯು 2023 ರ ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿದೆ. * ಭಾರತದ ಅಧ್ಯಕ್ಷತೆಯ ಅವಧಿಯಲ್ಲಿ ಭಾರತ, ಇಂಡೋನೇಷ್ಯಾ ಮತ್ತು ಬ್ರೆಜಿಲ್ ಸೇರಿಕೊಂಡು ಟ್ರೋಯಿಕಾ ವೇದಿಕೆಯನ್ನು ರಚಿಸಿಕೊಳ್ಳುತ್ತಿದ್ದು, ಈ ವೇದಿಕೆಯು ಜಿ-20 ಪ್ರಪಂಚದ ಪ್ರಮುಖ ಅಭಿವೃದ್ಧಿ ಹೊಂದಿದ್ದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕ ದೇಶಗಳ ಅಂತರ್‌ಸರ್ಕಾರಿ ವೇದಿಕೆಯಾಗಿದೆ.
* ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರಶಸ್ತಿ ನೀಡಿ ಗೌರವಿಸಿದೆ.* ಶಾಲೆ ಹಾಗೂ ಅಂಗನವಾಡಿ ಮಕ್ಕಳ ಅಪೌಷ್ಟಿಕತೆ ನಿವಾರಿಸಿ. ಹಿಂದಿನ ಕಾಂಗ್ರೆಸ್ ಸರ್ಕಾರವು ಸಹಯೋಗದೊಂದಿಗೆ ಆರಂಭಿಸಿದ್ದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.* ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಗೆ ಪ್ರಶಸ್ತಿಯನ್ನು ವಿಧಿಸಲಾಯಿತು.* ಈ ಪ್ರಶಸ್ತಿಯನ್ನು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಮಾರುಕಟ್ಟೆ ವಿಭಾಗದ ನಿರ್ದೇಶಕ ರಘುನಂದನ್, ಮಾರುಕಟ್ಟೆ ವಿಭಾಗದ ಅಪರ ನಿರ್ದೇಶಕ ಸತೀಶ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಡಿಜಿ ಕ್ಯಾರೋಲಿನ್ ಇಮೊಂಡ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.* ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿಯ ಅಂದಾಜು 54 ಸಾವಿರ ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ 39,50 ಲಕ್ಷ ಮಕ್ಕಳು ಸೇರಿ ರಾಜ್ಯದ…
* ಭಾರತದಲ್ಲಿ ಫಿಫಾ ಅಂಡರ್-17 ಮಹಿಳಾ ವಿಶ್ವಕಪ್ 2022 ಅನ್ನು ಆಯೋಜಿಸಲು ಕೇಂದ್ರ ಸಚಿವ ಸಂಪುಟವು ಸಹಿ ಹಾಕಿದೆ. * 2022 ರ FIFA U-17 ಮಹಿಳಾ ವಿಶ್ವಕಪ್ FIFA U-17 ಮಹಿಳಾ ವಿಶ್ವಕಪ್‌ನ 7 ನೇ ಆವೃತ್ತಿಯಾಗಿದೆ. * ಇದು ಅಕ್ಟೋಬರ್ 11 ರಿಂದ 30, 2022 ರವರೆಗೆ ನಡೆಯಲಿದೆ. * FIFA U-17 ಮಹಿಳಾ ವಿಶ್ವಕಪ್ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುತ್ತದೆ. * ಇದನ್ನು ಫೆಡರೇಶನ್ ಇಂಟರ್ನ್ಯಾಷನಲ್ ಡಿ ಫುಟ್ಬಾಲ್ ಅಸೋಸಿಯೇಷನ್ (FIFA) 2008 ರಿಂದ ಆಯೋಜಿಸಲಾಗಿದೆ. * ಇದನ್ನು FIFA ಸದಸ್ಯ ಸಂಘಗಳ 17 ವರ್ಷದೊಳಗಿನ ರಾಷ್ಟ್ರೀಯ ತಂಡಗಳು ಸ್ಪರ್ಧಿಸುತ್ತವೆ. * ಸಾಂಪ್ರದಾಯಿಕವಾಗಿ, ಇದನ್ನು ಸಮ-ಸಂಖ್ಯೆಯ ವರ್ಷಗಳಲ್ಲಿ ನಡೆಸಲಾಗುತ್ತದೆ. * ಭಾರತವು 2020 ರ ಆವೃತ್ತಿಯನ್ನು ಆಯೋಜಿಸಬೇಕಿತ್ತು, ಇದನ್ನು COVID-19 ಸಾಂಕ್ರಾಮಿಕ ರೋಗದಿಂದಾಗಿ ರದ್ದುಗೊಳಿಸಲಾಯಿತು. * 2022 ರ ಆವೃತ್ತಿಯು ಪುರುಷರ 2017 FIFA U-17 ವಿಶ್ವಕಪ್ ನಂತರ ಭಾರತವು ಎರಡನೇ ಬಾರಿಗೆ FIFA ಪಂದ್ಯಾವಳಿಯನ್ನು ಆಯೋಜಿಸುತ್ತದೆ…
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನ್ಯಾಸಕರು ಮತ್ತು ಸಹಾಯಕ ನಿರ್ದೇಶಕರ ಹುದ್ದೆಗಳು, ಆರ್ಥಿಕ ಮತ್ತು ಸಾಂಖಿಕ ನಿರ್ದೇಶನಾಲಯಗಳಲ್ಲಿ ಸಹಾಯಕ ಶಸ್ತ್ರ ಚಿಕಿತ್ಸಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 15/09/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 14/10/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 20* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ : 04* ಆರ್ಥಿಕ ಮತ್ತು ಸಾಂಖಿಕ ನಿರ್ದೇಶನಾಲಯ : 16 No. of posts: 20 Application Start Date: 15 ಸೆಪ್ಟೆಂಬರ್ 2022 Application End Date: 14 ಅಕ್ಟೋಬರ್ 2022 Last Date for Payment: 15 ಅಕ್ಟೋಬರ್ 2022 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ…
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲ ಅಭಿಯಂತರರು ಮತ್ತು ರೇಷ್ಮೆ ಇಲಾಖೆಯಲ್ಲಿ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 17/09/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/10/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 31* ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ : 25* ರೇಷ್ಮೆ ಇಲಾಖೆ : 06 No. of posts: 31 Application Start Date: 17 ಸೆಪ್ಟೆಂಬರ್ 2022 Application End Date: 17 ಅಕ್ಟೋಬರ್ 2022 Last Date for Payment: 18 ಅಕ್ಟೋಬರ್ 2022 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ…