ಕರ್ನಾಟಕದ ಹೈಕೋರ್ಟ್ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.
ಈ ವರ್ಷಕ್ಕೆ ಮಾತ್ರ ಅನ್ವಯ ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ, ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
Subscribe to Updates
Get the latest creative news from FooBar about art, design and business.