ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 1458 ಪುರುಷ ಮತ್ತು ಮಹಿಳಾ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) ಮತ್ತು ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1458
ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) – 143
ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) – 1315
No. of posts: 1458
Application Start Date: 4 ಜನವರಿ 2023
Application End Date: 25 ಜನವರಿ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಕೌಶಲ್ಯ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಾರೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಭ್ಯರ್ಥಿಗಳು ಪಿಯುಸಿ(PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25/01/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC / ST ಅಭ್ಯರ್ಥಿಗಳಿಗೆ 5 ವರ್ಷಗಳು
OBC ಅಭ್ಯರ್ಥಿಗಳಿಗೆ 3 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ
– ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) ಹುದ್ದೆಗಳಿಗೆ : 29,200/-ರಿಂದ92,300/-
– ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) ಹುದ್ದೆಗಳಿಗೆ : 25,500/- ರಿಂದ 81,100 /- ರೂ ಗಳ ವರೆಗೆ ವೇತನ ನಿಗದಿಪಡಿಸಲಾಗಿದೆ.