* 75 ನೇ ಅಮೃತ ಮಹೋತ್ಸವದ ದಿನದಂದು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂರಹಿತರಾಗಿರುವ 16 ಲಕ್ಷ ‘ಕೃಷಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ‘ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಪೌಷ್ಟಿಕ ಆಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.
* ಆಗಸ್ಟ್ 15 ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ 75 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿ ಬೊಮ್ಮಾಯಿ ಅವರು ಮಾತನಾಡಿದರು.
* * ಭೂರಹಿತ ಕೃಷಿ ಕಾರ್ಮಿಕರು ಆಧಿಕ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತಾ ವಲಯಗಳೆಂದು ಗುರುತಿಸಿ, 4050 ಅಂಗನವಾಡಿಗಳನ್ನು ತೆರೆಯಲಾಗುವುದು. ಇದರಿಂದ 8100 ಮಹಿಳೆಯರಿಗೆ ಉದ್ಯೋಗ ದೊರಕಲಿದೆ.
* ಪೌಷ್ಟಿಕ ಆಹಾರದ ಜೊತೆಗೆ ಶಾಲಾ ಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು.
* ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣಿಯುವ ಕುಶಲಕರ್ಮಿಗಳಿಗೆ ತಲಾ 50 ಸಾವಿರ ಧನ ಯೋಜನೆ ರೂಪಿಸಲಾಗಿದೆ .
* ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ಕಡ್ಡಾಯಗೊಳಿಸಲಾಗಿದೆ.
* ಅದಕ್ಕಾಗಿ ರೂ. 250 ಕೋಟಿ ಮಿಸಲಿಡಲಾಗಿದೆ ಒಂದು ಹೇಳಿದರು.
Subscribe to Updates
Get the latest creative news from FooBar about art, design and business.