ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು,
ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ ಸೆ.22 ರಂದು ನಡೆಸಲು ನಿರ್ಧರಿಸಲಾಗಿತ್ತು ಆದರೆ PSI ಪರೀಕ್ಷೆಯ ಆಕಾಂಕ್ಷಿಗಳಲ್ಲಿ ಹಲವಾರು ಸೆ.22 ರಂದು UPSC ಮುಖ್ಯ ಪರೀಕ್ಷೆಯನ್ನು ಬರೆಯುತ್ತಿದ್ದಾರೆ ಆದರಿಂದ PSI ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ.
ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿಯೇ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶವರ್ ಅವರು ತಿಳಿಸಿದ್ದಾರೆ.