ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಧಾರವಾಡ ಘಟಕದಲ್ಲಿ ಖಾಲಿ ಇರುವ 33 ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 1/03/2023 ರಾತ್ರಿ 11:59 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 33
* ಬೆರಳಚ್ಚು ನಕಲುಗಾರ : 2
* ಜವಾನ : 31
ಪ್ರಮುಖ ದಿನಾಂಕಗಳು :
– ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 1/02/2023
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1/03/2023
– ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 3/03/2023
No. of posts: 33
Application Start Date: 1 ಫೆಬ್ರುವರಿ 2023
Application End Date: 1 ಮಾರ್ಚ್ 2023
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಜವಾನ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ – ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಜವಾನ ಹುದ್ದೆಗಳಿಗೆ – ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಬೆರಳಚ್ಚು ನಕಲುಗಾರ : 21,400/- ರಿಂದ 42,000/-
* ಸೇವಕ : 17,000/- ರಿಂದ 28,950