ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ಘಟಕದಲ್ಲಿ ಖಾಲಿ ಇರುವ 20 ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2022 ರಾತ್ರಿ 11:59 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 20
– ಬೆರಳಚ್ಚುಗಾರರು : 7
– ಬೆರಳಚ್ಚು ನಕಲುಗಾರರು : 01
– ಸೇವಕರು : 12
No. of posts: 20
Application Start Date: 16 ಆಗಸ್ಟ್ 2022
Application End Date: 15 ಸೆಪ್ಟೆಂಬರ್ 2022
Last Date for Payment: 17 ಸೆಪ್ಟೆಂಬರ್ 2022
Work Location: ಚಿಕ್ಕಮಗಳೂರು ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
* ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಸೇವಕ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ – ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸೇವಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 150/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಬೆರಳಚ್ಚುಗಾರ : 21,400/- ರಿಂದ 42,000/-
* ಬೆರಳಚ್ಚು ನಕಲುಗಾರ : 21,400/- ರಿಂದ 42,000/-
* ಸೇವಕ : 17,000/- ರಿಂದ 28,950