ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿಯಾಗಿ ಸಿಬ್ಬಂದಿಯವರನ್ನು ಆಯ್ಕೆ ಮಾಡಲು ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/09/2022 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:10
ಡೇಟಾ ಎಂಟ್ರಿ ಆಪರೇಟರ್ – 06
ಆಡ್ ಮಿನಿಸ್ಟ್ರೇಟಿವ್ ಅಸಿಸ್ಟಂಟ್ – 01
ಟೆಕ್ನಿಕಲ್ ಕೋ ಆರ್ಡಿನೇಟರ್ – 01
ತಾಂತ್ರಿಕ ಸಹಾಯಕರು – 02
No. of posts: 10
Application Start Date: 27 ಆಗಸ್ಟ್ 2022
Application End Date: 8 ಸೆಪ್ಟೆಂಬರ್ 2022
Work Location: ಚಿತ್ರದುರ್ಗ ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC/B.Com/B.E/ B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
* ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದಿನಾಂಕ: 31-07-2022ಕ್ಕೆ ಅನ್ವಯಿಸುವಂತೆ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ
* ಪ.ಜಾ , ಪ.ಪಂ ಮತ್ತು ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ,
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.17,600 – 29,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.