ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ ಒಟ್ಟು1104 ಅಪ್ರೆಂಟಿಸ್ ಷಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ02-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 1104
Application Start Date: 28 ಜುಲೈ 2023
Application End Date: 2 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಮತ್ತು ಐಟಿಐ (ITI) 2 ವರ್ಷಗಳ ಪ್ರಮಾಣ ಪತ್ರ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / –
– ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/08/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.