ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ ಘಟಕದಲ್ಲಿ ಖಾಲಿ ಇರುವ 43 ಆದೇಶ-ಜಾರಿಕಾರರು ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: 43
* ಆದೇಶ-ಜಾರಿಕಾರರು : 11
* ಸೇವಕರು : 32
No. of posts: 43
Application Start Date: 4 ಸೆಪ್ಟೆಂಬರ್ 2023
Application End Date: 3 ಅಕ್ಟೋಬರ್ 2023
Work Location: ಹಾಸನ ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
– ಆದೇಶ-ಜಾರಿಕರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 25 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
– ಸೇವಕ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ-ಜಾರಿಕರ ಹುದ್ದೆಗಳಿಗೆ ಹುದ್ದೆಗಳಿಗೆ – SSLC(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
* ಸೇವಕ ಹುದ್ದೆಗಳಿಗೆ : SSLC(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಆದೇಶ-ಜಾರಿಕಾರರು : 19,950/- ರಿಂದ 37,900/-
* ಸೇವಕ : 17,000/- ರಿಂದ 28,950/-