ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳ್ಳಲಿದೆ.
ಬಿ.ಆರ್.ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಗೆ “ಸಮಾನತೆಯ ಪ್ರತಿಮೆ” ಎಂದು ಹೆಸರಿಡಲಾಗಿದ್ದು, ಈ ಪ್ರತಿಮೆಯನ್ನು ಖ್ಯಾತ ಶಿಲ್ಪಿ, ಪದ್ಮ ಪ್ರಶಸ್ತಿ ಪುರಸ್ಕೃತ ರಾಮ್ ವಾಂಚಿ ಸುತಾರ್ ಅವರು ನಿರ್ಮಿಸಿದ್ದಾರೆ.
ಸುತಾರ್ ಅವರು ಗುಜರಾತ್ ನ ಅಹಮದಾಬಾದ್ ನಲ್ಲಿ ಇರುವ ಅತೀ ಎತ್ತರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯನ್ನು ಕೂಡಾ ರಾಮ್ ವಾಂಚಿ ಸುತಾರ್ ಅವರು ನಿರ್ಮಿಸಿದ್ದಾರೆ.
ಭಾರತದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅಮೆರಿಕದ ಮೇರಿಲ್ಯಾಂಡ್ ನಲ್ಲಿ ಅಂಬೇಡ್ಕರ್ ಇಂಟರ್ ನ್ಯಾನಲ್ ಸೆಂಟೆಡ್ ಸುಮಾರು 13 ಎಕರೆ ಸ್ಥಳದಲ್ಲಿ ಪ್ರತಿಮೆಯನ್ನು ನಿರ್ಮಿಸಿರುವುದಾಗಿ ವರದಿ ತಿಳಿಸಿದೆ.
ಭಾರತದ ಹೊರಗೆ ಅಂದರೆ ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ನಿರ್ಮಾಣಗೊಂಡ ಅತೀ ದೊಡ್ಡ ಪ್ರತಿಮೆ ಇದಾಗಿದ್ದು, ಅಂಬೇಡ್ಕರ್ ಅವರ ನೆನಪಿಗಾಗಿ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದಾಗಿ ತಿಳಿಸಿದೆ.
ಇತ್ತೀಚಿಗೆ ಹೈದರಾಬಾದ್ ನಲ್ಲಿ ಅನಾವರಣಗೊಂಡ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯು ವಿಶ್ವದಲ್ಲಿಯೇ ಅತಿ ಎತ್ತರದ್ದಾಗಿದ್ದೆ ಎಂದು ತಿಳಿಸಿದೆ.
Subscribe to Updates
Get the latest creative news from FooBar about art, design and business.