ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ನಿರ್ವಾಹಕರು (Conductor) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ KEA ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಯು 2024 ಸೆಪ್ಟೆಂಬರ್- 01 ರಂದು ನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.