* ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. 86 ವರ್ಷದ ಇವರು ವಯೋಸಹಜ ಕಾರಣಗಳಿಂದ ಮಂಗಳವಾರ ಜನೆವರಿ 10 ರಂದು ಮಧ್ಯಾಹ್ನ 1 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
* ಸಾರಾ ಅವರು ಗಡಿನಾಡು ಕಾಸರಗೋಡಿನ ಮಲಯಾಳಂ ಮಾತನಾಡುವ ಕುಟುಂಬದಲ್ಲಿ ವಕೀಲರಾದ ಪಿ ಅಹಮದ್ ಮತ್ತು ಝೈನಬಿ ಅವರ ಮಗಳಾಗಿ ಜೂನ್ 30, 1936 ರಂದು ಜನಿಸಿದರು. ಬೆಳೆಯುವಾಗಲೆ ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು.
* ಸಾರಾ ರವರ ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ. ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.
* ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಹಾಗೂ ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಹಾಗೂ ಇನ್ನಿತರ ಹಲವಾರು ಪ್ರಮುಖ ಪ್ರಶಸ್ತಿಗಳು ಇವರಿಗೆ ಲಭಿಸಿವೆ.
Subscribe to Updates
Get the latest creative news from FooBar about art, design and business.
Previous Articleಆಸ್ಕರ್ ಅರ್ಹತೆ ಪಡೆದ ಕನ್ನಡದ ವಿಕ್ರಾಂತ್ ರೋಣ ಹಾಗೂ ಕಾಂತಾರ ಸಿನಿಮಾಗಳು