ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ನಿರ್ವಾಹಕರು (Conductor) ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ KEA ಯು ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿ ಪರೀಕ್ಷೆಯನ್ನು ದಿನಾಂಕ 2024 ಸೆಪ್ಟೆಂಬರ್- 01 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 11.09.2024 ರಂದು ಪ್ರಕಟಿಸಲಾಗಿರುತ್ತದೆ. ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಿಂಕ್ ಮೂಲಕ ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18.09.2024 ಸಂಜೆ 5.30 ರೊಳಗೆ ನಿಗದಿತ ಲಿಂಕ್ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿತ್ತು. ತಾತ್ಕಾಲಿಕ ಅಂಕ ಪಟ್ಟಿಗೆ ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಯು ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಗಳನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಅಂಕಗಳನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.
Subscribe to Updates
Get the latest creative news from FooBar about art, design and business.
KEAಯಿಂದ ಅಧಿಸೂಚಿಸಲಾದ BMTC Conductor ಹುದ್ದೆಗಳ ಅಂತಿಮ ಅಂಕ ಪಟ್ಟಿ ಪ್ರಕಟ
Previous Articleಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆ ನಿರೀಕ್ಷಕ (CTI) ಪರೀಕ್ಷೆ ಬರೆದವರಿಗಾಗಿ ಪ್ರಮುಖ ಮಾಹಿತಿ
Next Article ಸೆಪ್ಟೆಂಬರ್ 26 ವಿಶ್ವ ಪರಿಸರ ಅರೋಗ್ಯ ದಿನ