ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಯಶಸ್ವಿಯಾಗಿ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಅಂಕಗಳನ್ನು ಕೂಡ ಪ್ರಕಟಿಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆಯು ಪೂರ್ಣಗೊಂಡಿದ್ದು, ಒಂದು ಅನುಪಾತ ಒಂದರಂತೆ (1:1) ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ(ಒಂದು ವಾರದಲ್ಲಿ) ಪ್ರಕಟಿಸಲಿದೆ.
* ಈ ಕುರಿತು ಮಾನ್ಯ ಶಿಕ್ಷಣ ಸಚಿವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಲಿದೆ.