* ಕರ್ನಾಟಕ ಜಾನಪದ ಪರಿಷತ್ತು ಮತ್ತು ಜಾನಪದ ಲೋಕದ ನೂತನ ಅಧ್ಯಕ್ಷರಾಗಿ ಡಾll ಹಿ. ಶಿ ರಾಮಚಂದ್ರೇಗೌಡ ಆಯ್ಕೆಯಾಗಿದ್ದಾರೆ.
* ಕರ್ನಾಟಕ ಜಾನಪದ ಪರಿಷತ್ತು ಮತ್ತು ಜಾನಪದ ಲೋಕದ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಸಿರಿಭವನದಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಹಿರಿಯ ಜಾನಪದ ವಿದ್ವಾಂಸ ಡಾll ಹಿ. ಶಿ ರಾಮಚಂದ್ರೇಗೌಡರನ್ನು ಆಯ್ಕೆ ಮಾಡಲಾಗಿದೆ.
* ಕರ್ನಾಟಕ ಜಾನಪದ ಪರಿಷತ್ತು ನಾಡೋಜ ಹೆಚ್. ಎಲ್ ನಾಗೇಗೌಡರು ಕಟ್ಟಿ ಬೆಳೆಸಿದ್ದಾರೆ.
* ಮ್ಯಾನೇಜಿಂಗ್ ಟ್ರಸ್ಟಿಯಾಗಿ ಆದಿತ್ಯ ನಂಜರಾಜ್ ರವರೇ ಮುಂದುವರೆಯಲಿದ್ದಾರೆ.
* ಡಾll ಹಿ. ಶಿ ರಾಮಚಂದ್ರೇಗೌಡರು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಜಾನಪದ ವಿದ್ವಾಂಸರಾಗಿ, 2001-2004 ರ ಅವಧಿಯಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿ ಅಧ್ಯಕ್ಷರಾಗಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಸಮಗ್ರ ಜನಪದ ಸಾಹಿತ್ಯ ಪ್ರಕಟಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
* ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಗೋಪಾಲಗೌಡ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ.
* ರೈತ ಹೋರಾಟದ ಗೀತೆ ಸೇರಿದಂತೆ, ಜಾನಪದ ಕ್ಷೇತ್ರದಲ್ಲಿ 21 ಕೃತಿಗಳನ್ನು ರಚಿಸಿದ್ದಾರೆ.
Subscribe to Updates
Get the latest creative news from FooBar about art, design and business.