ಹಲವು ವರ್ಷಗಳಿಂದ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮತ್ತು PU ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅನುಮತಿ ದೊರೆತಿದ್ದು, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಈ ಕೆಳಕಂಡ 2500 ವಿವಿಧ ವಿಷಯಗಳ ಶಿಕ್ಷಕರ ಮತ್ತು 778 PU ಕಾಲೇಜು ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿಯನ್ನು ನೀಡಿದೆ.
ಹುದ್ದೆಗಳ ವಿವರ :
– ಸಹ ಶಿಕ್ಷಕರು 2200
– ದೈಹಿಕ ಶಿಕ್ಷಕರು 200
– ವಿಶೇಷ ಶಿಕ್ಷಕರು 100
– PU ಕಾಲೇಜು ಉಪನ್ಯಾಸಕರು : 778
* ಈ ಕುರಿತು ಮಾನ್ಯ ಶಿಕ್ಷಣ ಸಚಿವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.