* ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ(Bengaluru) ನಾಡಪ್ರಭು ಕೆಂಪೇಗೌಡರ (Statue of Kempegowda) 108 ಅಡಿಯ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ.
* ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(Kempegowda International Airport) ಸಮೀಪ ಅನಾವರಣಗೊಂಡಿರುವ 108 ಅಡಿ ಎತ್ತರದ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದ್ದು ಇದಕ್ಕೆ ಪ್ರಗತಿಯ ಪ್ರತಿಮೆ(Statue of Prosperity) ಎಂದು ಕರ್ನಾಟಕ ಸರ್ಕಾರ ನಾಮಕರಣ ಮಾಡಿದೆ.
* ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಗರ ನಿರ್ಮಾತೃ ಒಬ್ಬರ ವಿಶ್ವದ ಅತಿ ಎತ್ತರದ ಪ್ರತಿಮೆ ಇದು ಎಂಬ ಹೆಗ್ಗಳಿಕೆಗೆ ಪಡೆದಿರುವುದು ವಿಶೇಷ. ಗುಜರಾತ್‌ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್(Ram V Sutar) ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.
* ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದ್ದು, ಪ್ರತಿಮೆಯ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್ ಕಂಚನ್ನು ಬಳಕೆ ಮಾಡಲಾಗಿದೆ.
* ಈ ಪ್ರತಿಮೆ ಬೆಂಗಳೂರು ನಗರದಲ್ಲಿಯೇ ಅತಿ ಎತ್ತರದ ಪ್ರತಿಮೆಯಾಗಿದ್ದು, ಪ್ರತಿಮೆ ಜಾಗದಲ್ಲಿಯೇ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.
Subscribe to Updates
Get the latest creative news from FooBar about art, design and business.
ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆ
Previous Articleರೂಪಾಯಿ ಮೂಲಕ ಅಂತಾರಾಷ್ಟ್ರೀಯ ವ್ಯಾಪಾರ