ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ 71 ಕಾನ್ ಸ್ಟೇಬಲ್ ಮತ್ತು ಗ್ರೂಪ್ – ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/03/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 71
Application Start Date: 20 ಫೆಬ್ರುವರಿ 2023
Application End Date: 21 ಮಾರ್ಚ್ 2023
Work Location: ಭಾರತದಾದ್ಯಂತ
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 21700-69100/- ರುಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.