ಕರ್ನಾಟಕ ವಿಧಾಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಸೇರಿದಂತೆ ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/05/2022 ಸಂಜೆ 4 ಗಂಟೆಯೊಳಗೆ ಅಂಚೆಯ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕು.
ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ : 43
* ವರದಿಗಾರರು – 2
* ಕಿರಿಯ ಸಹಾಯಕ – 10
* ಕಂಪ್ಯೂಟರ್ ಆಪರೇಟರ್ – 4
* ಬೆರಳಚ್ಚುಗಾರ – 1
* ದಲಾಯತ್ – 26
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ : 5074, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.No. of posts: 43Application Start Date: 29 ಎಪ್ರಿಲ್ 2022Application End Date: 27 ಮೇ 2022Work Location: ಕರ್ನಾಟಕSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಅಥವಾ ಇವೆರಡನ್ನೂ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ 7ನೇ ತರಗತಿ, SSLC/ BCA/ B.Sc ಪದವಿ ಪಡೆದಿರಬೇಕು.
* ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕು.Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ಹೊಂದಿರಬೇಕು
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000/- ರಿಂದ 70,850/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.