ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 07 ಆಗಸ್ಟ 2020 ಅಧಿಸೂಚಿಸಿದ ಲೋಕೋಪಯೋಗಿ ಇಲಾಖೆಯ 330 ಗ್ರೂಪ್-ಸಿ ವೃಂದದ ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲೋಕಸೇವಾ ಆಯೋಗವು ಪ್ರಸ್ತುತ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದ Cut-Off ಅಂಕಗಳನ್ನು ಪ್ರಕಟಿಸಿದ್ದು,
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದ Cut-Off ಅಂಕಗಳನ್ನು ವೀಕ್ಷಿಸಬಹುದಾಗಿರುತ್ತದೆ
ಹಾಗೂ ತಾತ್ಕಾಲಿಕ ಆಯ್ಕೆಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸದರಿ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ಇವರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.