ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ230 ಗ್ರೂಪ್ ಸಿ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ01/09/2023 ರಿಂದ ಆರಂಭಗೊಂಡು ದಿನಾಂಕ 30/09/2023 ರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 230
Application Start Date: 1 ಸೆಪ್ಟೆಂಬರ್ 2023
Application End Date: 30 ಸೆಪ್ಟೆಂಬರ್ 2023
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 33,450 – 62,600/ ವೇತನ ನೀಡಲಾಗುವದು.