ಕರ್ನಾಟಕ ಲೋಕಸೇವಾ ಆಯೋಗದಿಂದ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ ದ್ವಿತೀಯ ದರ್ಜೆಯ ಸಹಾಯಕ ಗ್ರೂಪ್ ಸಿ ವೃಂದದ ಒಟ್ಟು 155 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 11/07/2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 10/08/2022 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ನಾಗರೀಕ ನಾಗಿರಬೇಕು. ಈ ದ್ವಿತೀಯ ದರ್ಜೆಯ ಬ್ಯಾಕ್ ಲಾಗ್ ಹುದ್ದೆಗಳು ಪಿಂಚಣಿ ರಹಿತ ವಾಗಿರುತ್ತವೆ.
No. of posts: 155
Application Start Date: 11 ಜುಲೈ 2022
Application End Date: 10 ಆಗಸ್ಟ್ 2022
Work Location: ಕರ್ನಾಟಕ
Selection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಯಸ್ಸು ಮತ್ತು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC, ITI, Diploma, HSC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಧವಿದ್ಯಾಲಯದಿಂದ ಹೊಂದಿರಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ತೆಗೆದುಕೊಂಡು ಉತ್ತೀರ್ಣರಾಗಿರಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ21,400 ರಿಂದ 42,000 ರವರೆಗೆ ವೇತನ ಪಡೆಯಲಿದ್ದಾರೆ.