* ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯುತ್ತಿರುವ 2022 ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ತನ್ನ ಹೋರಾಟ ಕೊನೆಗೊಳಿಸಿದೆ.
* ಅಂತಿಮ ನಾಲ್ಕರ ಘಟ್ಟದ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಅಪಾಯಕಾರಿ ಇಂಗ್ಲೆಂಡ್ ಎದುರು 10 ವಿಕೆಟ್‌ಗಳ ಹೀನಾಯ ಸೋಲುಂಡಿತು. ಅಂದಹಾಗೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಒಂದನ್ನು ಬರೆದಿದ್ದಾರೆ.
* ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ 10 ವಿಕೆಟ್‌ಗಳಿಂದ ಹೀನಾಯವಾಗಿ ಸೋತ ಭಾರತ ತಂಡ ಸ್ಪರ್ಧೆಯಿಂದ ಹೊರಬಿದ್ದಿದೆ.
* ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಇದರಿಂದಾಗಿ ಭ್ರಮನಿರಸವಾಗಿದ್ದರೂ, ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಪ್ರದರ್ಶನ ಕೊಂಚ ನಿರಾಳ ತಂದಿದೆ, ಭಾರತದ ಮಾಜಿ ನಾಯಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.
* ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆಸರೆಯಾಗಿ ನಿಂತ ವಿರಾಟ್ ಕೊಹ್ಲಿ, 42 ಎಸೆತಗಳಲ್ಲಿ 50 ರನ್ ಬಾರಿಸಿದರು. ಇದರಲ್ಲಿ 4 ಫೋರ್ ಮತ್ತು 1 ಸಿಕ್ಸರ್ ಮೂಡಿಬಂದಿತು.
* ಇನಿಂಗ್ಸ್‌ನ 15 ನೇ ಓವರ್‌ನಲ್ಲಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಕವರ್ಸ್ ಕಡೆಗೆ ಫೋರ್ ಬಾರಿಸುವ ಮೂಲಕ ವಿರಾಟ್, ಟಿ20-ಐ ಕ್ರಿಕೆಟ್‌ನಲ್ಲಿ 4 ಸಾವಿರ ರನ್‌ಗಳ ಗಡಿ ದಾಟಿದರು.
* ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆಸರೆಯಾಗಿ ನಿಂತ ವಿರಾಟ್ ಕೊಹ್ಲಿ, 42 ಎಸೆತಗಳಲ್ಲಿ 50 ರನ್ ಬಾರಿಸಿದರು, ಇದರಲ್ಲಿ 4 ಫೋರ್ ಮತ್ತು 1 ಸಿಕ್ಸರ್ ಮೂಡಿಬಂದಿತು.
* ಇನಿಂಗ್ಸ್‌ನ 15 ನೇ ಓವರ್‌ನಲ್ಲಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಕವರ್ಸ್ ಕಡೆಗೆ ಫೋರ್ ಬಾರಿಸುವ ಮೂಲಕ ವಿರಾಟ್, ಟಿ20-ಐ ಕ್ರಿಕೆಟ್‌ನಲ್ಲಿ 4 ಸಾವಿರ ರನ್‌ಗಳ ಗಡಿ ದಾಟಿದರು.
* 2022 ರ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ 6 ಇನಿಂಗ್ಸ್‌ಗಳಲ್ಲಿ 4 ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ, ಒಟ್ಟಾರೆ 270 ರನ್‌ಗಳನ್ನು ಬಾರಿಸಿದ್ದಾರೆ.
* ಟೂರ್ನಿಯುದ್ದಕ್ಕೂ ಭಾರತ ತಂಡಕ್ಕೆ ಸ್ಪೋಟಕ ಆರಂಭ ಕೊಡಲು ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ವಿಫಲರಾದರೂ ಆಸರೆಯಾಗಿ ನಿಂತ ವಿರಾಟ್ ಕೊಹ್ಲಿ ರನ್ ಹೊಳೆ ಹರಿಸಿದ್ದರು.
* ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸಿ ಭಾರತ ತಂಡಕ್ಕೆ ಏಕಾಂಗಿಯಾಗಿ ಜಯ ತಂದುಕೊಟ್ಟಿದ್ದರು.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು
1. ವಿರಾಟ್ ಕೊಹ್ಲಿ (ಭಾರತ): 4008 ರನ್
2. ರೋಹಿತ್ ಶರ್ಮಾ (ಭಾರತ): 3853 ರನ್
3. ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್): 3531 ರನ್
4. ಬಾಬರ್ ಆಝಮ್ (ಪಾಕಿಸ್ತಾನ): 3323 ರನ್
5. ಪಾಲ್ ಸ್ಟಿರ್ಲಿಂಗ್ (ಐರ್ಲೆಂಡ್): 3181 ರನ್
Subscribe to Updates
Get the latest creative news from FooBar about art, design and business.
ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ನಾಲ್ಕು ಸಾವಿರ ರನ್
Previous Articleನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆ
Next Article IBA ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್