ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಸ್ಟ್ 27 ರಂದು ನಡೆದ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ (KPSC KAS) ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿ ವಿಚಾರದ ಕುರಿತು ಗಮನ ಹರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳೊಳಗಾಗಿ ಈ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದರು.
ಅದರಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ (KAS) 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು2024 ಡಿ.29 ರಂದು ನಡೆಸಲು ನಿಗದಿಪಡಿಸಲಾಗಿದೆ.
ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಭ್ಯರ್ಥಿಗಳು ದೃತಿಗೆಡದೆ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕು ಗೊಳಿಸಿ ಉತ್ತಮ ತಯಾರಿ ಮಾಡಿಕೊಳ್ಳಿ.