ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 09/09/2022 ರಂದು ಅಧಿಸೂಚಿಸಲಾದ ಮೀನುಗಾರಿಕೆ ಇಲಾಖೆಯಲ್ಲಿನ 08 (HK) ಮೀನುಗಾರಿಕಾ ಸಹಾಯಕ ನಿರ್ದೇಶಕರ (Assistant Director) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು-560001